ADVERTISEMENT

25 ವರ್ಷಗಳ ಹಿಂದೆ: ಹುಬ್ಬಳ್ಳಿ ಪೀಠ ಸ್ಥಾಪನೆಗೆ ಕೇಂದ್ರ ಸರ್ಕಾರ ಬದ್ಧ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 23:30 IST
Last Updated 26 ಜುಲೈ 2025, 23:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ನವದೆಹಲಿ, ಜುಲೈ 25– ಹೈಕೋರ್ಟ್‌ ಪೀಠ ಸ್ಥಾಪನೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದ ಹೊರತಾಗಿಯೂ ಹುಬ್ಬಳ್ಳಿ– ಧಾರವಾಡದಲ್ಲಿ ಪೀಠ ಸ್ಥಾಪಿಸಲು ಕೇಂದ್ರ ಸರ್ಕಾರ ತೀವ್ರ ಆಸಕ್ತಿ ಹೊಂದಿದೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಸಮಯದಲ್ಲಿಯೇ ಕೇಂದ್ರದ ಕಾನೂನು ಸಚಿವರೂ ರಾಜೀನಾಮೆ ನೀಡಿ ಆ ಖಾತೆಗೆ ಹೊಸ ಸಚಿವರ ನೇಮಕವಾಗಿರುವ ಕಾರಣ, ‘ಅಂತಿಮ ಹಂತ’ದಲ್ಲಿರುವ ನಿರ್ಧಾರದ ಪ್ರತಿಕ್ರಿಯೆಗೆ ಸ್ವಲ್ಪ ಹಿನ್ನಡೆ ಉಂಟಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಪೀಠ ಸ್ಥಾಪನೆಯ ನಿರ್ಧಾರಕ್ಕೆ ಬದ್ಧವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT