ನಾಟಿಂಗ್‌ಹ್ಯಾಮ್‌ಶೈರ್ (ಯು.ಕೆ), ಸೆ. 26– ಇಲ್ಲಿನ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 80 ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಬೆಂಕಿಯ ಜ್ವಾಲೆ ಆವರಿಸಿರುವ ಗಣಿಯಲ್ಲಿ ಸತತ ಏಳು ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಗಣಿಯಲ್ಲಿ ಕೆಲಸ
ಮಾಡುತ್ತಿದ್ದವರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
ಸೆಪ್ಟೆಂಬರ್‌ನಲ್ಲಿ ನಡೆದಿರುವ ಎರಡನೇ ಗಣಿ ದುರಂತ ಇದಾಗಿದೆ. ಸೆಪ್ಟೆಂಬರ್ 7ರಂದು ಆರಿಷೇರ್ ಸ್ಕಾಟ್ಲೆಂಡ್ ಪ್ರದೇಶದ ಗಣಿಯಲ್ಲಿ ಸಂಭವಿಸಿದ್ದ ಅವಘಡದಲ್ಲಿ 129 ಮಂದಿ ಸಿಲುಕಿದ್ದರು. ಅವರಲ್ಲಿ 116 ಮಂದಿಯನ್ನು ರಕ್ಷಿಸಲಾಗಿತ್ತು. ಉಳಿದವರು ಅಸುನೀಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.