ADVERTISEMENT

25 ವರ್ಷಗಳ ಹಿಂದೆ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ; ಮತದಾನ ಶಾಂತಿಯುತ

ಸೋಮವಾರ, 13 ನವೆಂಬರ್ 2000

ಪ್ರಜಾವಾಣಿ ವಿಶೇಷ
Published 12 ನವೆಂಬರ್ 2025, 19:30 IST
Last Updated 12 ನವೆಂಬರ್ 2025, 19:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ: ಮತದಾನ ಶಾಂತಿಯುತ 

ನವದೆಹಲಿ, ನ. 12 (ಪಿಟಿಐ, ಯುಎನ್‌ಐ)– ಲಖನೌದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ ಮಧ್ಯೆ ನಡೆದ ಘರ್ಷಣೆಯಲ್ಲಿ 10 ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಗಾಯಗೊಂಡ ಘಟನೆ ಹೊರತುಪಡಿಸಿದರೆ, ಅಖಿಲ ಭಾರತ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಷ್ಟ್ರಾದ್ಯಂತ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು.

ಮತದಾನದ ಸಂದರ್ಭದಲ್ಲಿ ಜಿತೇಂದ್ರ ಪ್ರಸಾದರ ಬೆಂಬಲಿಗರೆಂದು ಶಂಕಿಸಲಾದ ಕೆಲವರು ಲಖನೌದ ನೆಹರೂ ಭವನದಲ್ಲಿರುವ ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಚೇರಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ಮಾಡಿದರು.

ADVERTISEMENT

_____________________

ಅಡ್ವಾಣಿ ರಾಜೀನಾಮೆ ಪ್ರಶ್ನೆ: ಸಮಯ ಬಂದಾಗ ಪರಿಶೀಲನೆ

ನವದೆಹಲಿ, ನ. 12 (ಪಿಟಿಐ)– ಬಾಬರಿ ಮಸೀದಿ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಲ್‌.ಕೆ. ಅಡ್ವಾಣಿ ಮತ್ತು ಇತರ ಇಬ್ಬರು ಸಚಿವರ ವಿರುದ್ಧ ಆರೋಪ ಪಟ್ಟಿ ಹೊರಿಸಿದಾಗ ಖಂಡಿತವಾಗಿಯು ಆ ವೇಳೆಯಲ್ಲಿ ಅದನ್ನು ಪರಿಶೀಲಿಸಲಾಗುವುದು ಎಂಬುದಾಗಿ ಬಿಜೆಪಿ ಅಧ್ಯಕ್ಷ ಬಂಗಾರು ಲಕ್ಷ್ಮಣ್‌ ಇಂದು ಇಲ್ಲಿ ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.