ಬೆಂಗಳೂರು, ಆ.4 – ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳನ್ನು ಯಾವುದೇ ನೋಟಿಸ್ ನೀಡದೆ ರದ್ದುಪಡಿಸಲು ಸರ್ಕಾರಕ್ಕೆ ಅಧಿಕಾರ ನೀಡಲು ಕರ್ನಾಟಕ ಸಹಕಾರ ಕಾಯ್ದೆ 30ನೇ ವಿಧಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.
ಸಹಕಾರ ಸಂಘಗಳ ರಿಜಿಸ್ಟಾರ್ ವರದಿಯ ಆಧಾರದ ಮೇಲೆ ಸರ್ಕಾರ ಆಡಳಿತ ಮಂಡಲಿಗಳನ್ನು ರದ್ದುಪಡಿಸಬಹುದಾಗಿದೆ ಎಂದು ವಾರ್ತಾ ಸಚಿವ ಪ್ರೊ.ಬಿ.ಕೆ ಚಂದ್ರಶೇಖರ್ ಸಂಪುಟ ಸಭೆಯ ನಂತರ ಸಂಜೆ ವರದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.