13 ಬಾರಿ ಭೂಮಿ ಕಂಪಿಸಿದ ಅನುಭವ
ದಿಬ್ರುಗರ್, ಸೆಪ್ಟೆಂಬರ್ 14– ದಿಬ್ರು ಗರ್ ವ್ಯಾಪ್ತಿಯಲ್ಲಿ ಇಂದು 13ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಆದರೆ, ಭೂಮಿ ಕಂಪಿಸಿದ್ದರಿಂದ ಭಯಗೊಂಡು ಮನೆಯಿಂದ ಬಯಲು ಪ್ರದೇಶಕ್ಕೆ ಹೊರಬರುವ ವೇಳೆ ಮನೆಯಲ್ಲಿದ್ದ ಸಾಮಗ್ರಿಗಳು ಮೈಮೇಲೆ ಬಿದ್ದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.
ಈ ಪ್ರದೇಶದಲ್ಲಿ ಆಗಾಗ್ಗೆ ಭೂಮಿ ಕಂಪಿಸಿದ ಅನುಭವವಾಗುತ್ತಿದೆ. ಕಳೆದ ಆಗಸ್ಟ್ 15ರಂದು ಸಂಭವಿಸಿದ ಭೂಕಂಪ ಬಳಿಕ 310 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.