
ಪುರಸಭೆ, ನಗರಸಭೆ, ಪಾಲಿಕೆಗಳಿಗೆ ಏಕಕಾಲಕ್ಕೆ ಚುನಾವಣೆ ಪರಿಶೀಲನೆ
ಬೆಂಗಳೂರು, ನ. 13– ರಾಜ್ಯದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳಿಗೆ
ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ, ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.
ಪ್ರಶ್ನೋತ್ತರ ವೇಳೆಯಲ್ಲಿ ರಾಮಚಂದ್ರ ಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ, ವಿರೋಧ ಪಕ್ಷಗಳ ಸದಸ್ಯರು ಈ ಸಂಬಂಧ ಮಾಡಿದ ಸಲಹೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದರು.
_______________
ಸಂಕಷ್ಟದಲ್ಲಿರುವ ರೈತರಿಗಾಗಿ 100 ಕೋಟಿ ಆವರ್ತ ನಿಧಿ
ಬೆಂಗಳೂರು, ನ. 13– ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಬೆಲೆ ತೀವ್ರ ಕುಸಿದು ಸಂಕಷ್ಟ ಸ್ಥಿತಿಯನ್ನು ಎದುರಿಸುತ್ತಿರುವ ರೈತನ ನೆರವಿಗೆ ಧಾವಿಸಲು ರಾಜ್ಯ ಸರ್ಕಾರವು 100 ಕೋಟಿ ರೂಪಾಯಿಗಳ ಆವರ್ತ ನಿಧಿಯನ್ನು ಸ್ಥಾಪಿಸಲು ಇಂದು ನಿರ್ಧರಿಸಿದೆ.
ಬೆಳಿಗ್ಗೆ ಸೇರಿದ್ದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಆದ ಕಾರಣ– ಪರಿಣಾಮ ಕುರಿತು ಸುದೀರ್ಘ ಚರ್ಚೆ ನಡೆಯಿತು ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.