
ಬೆಂಗಳೂರು, ಜ. 15– ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮತಿ
ಯೊಡನೆ 36 ಎಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯಲು ಈಚಿನ ಸಚಿವ ಸಂಪುಟವು ಒಪ್ಪಿಗೆ ನೀಡಿದ್ದರೂ, ಸರ್ಕಾರ ಕಾಲೇಜುಗಳ ಸಂಖ್ಯೆಯನ್ನು ಇದೀಗ 40ಕ್ಕೆ ಏರಿಸಿದೆ.
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯೂ ಸೇರಿದಂತೆ ಮತ್ತೆ 4 ಸಂಸ್ಥೆಗಳಿಗೆ ಎಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ
ಜಿ. ಪರಮೇಶ್ವರ್ ಇಂದು ಇಲ್ಲಿ ವರದಿಗಾರರಿಗೆ ತಿಳಿಸಿದರು. ರಾಘವೇಂದ್ರ ಶಿಕ್ಷಣ ಸಂಸ್ಥೆ, ಆಲ್ ಹಮ್ದ್ ಶಿಕ್ಷಣ ಸಂಸ್ಥೆ (ಎರಡೂ ಬೆಂಗಳೂರು) ಮತ್ತು ನಿಟ್ಟೆ ಶಿಕ್ಷಣ ಸಂಸ್ಥೆಗಳಿಗೂ ಇದೇ ರೀತಿ ಎಂಜಿನಿಯರಿಂಗ್ ಕಾಲೇಜು ತೆರೆಯಲು ಅನುಮತಿ ನೀಡಲಾಗಿದೆ.
ಬೆಂಗಳೂರು, ಜ. 15– ಆಂಧ್ರ ಪ್ರದೇಶದಲ್ಲಿಯೂ ಕುಲಪತಿಗಳ ನೇಮಕದ ಅಧಿಕಾರವನ್ನು ಸರ್ಕಾರವೇ ತನ್ನ ಕೈಯಲ್ಲಿ ಇರಿಸಿಕೊಂಡಿರುವಾಗ, ಕರ್ನಾಟಕ ತರಲು ಉದ್ದೇಶಿಸಿರುವ ವಿಶ್ವವಿದ್ಯಾಲಯಗಳ ತಿದ್ದುಪಡಿಗೆ ಮಾತ್ರ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ಏಕೆ ಆಕ್ಷೇಪ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ ಇಂದು ಇಲ್ಲಿ ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.