ನವದೆಹಲಿ, ಜುಲೈ 1– ಹುಬ್ಬಳ್ಳಿ– ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ಈಡೇರುವ ದಿನಗಳು ಸಮೀಪಿಸುತ್ತಿರುವಂತೆ ಕಾಣುತ್ತಿದೆ.
ಕರ್ನಾಟಕ ಹೈಕೋರ್ಟಿನ ಪ್ರತ್ಯೇಕ ಪೀಠವನ್ನು ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪಿಸುವ ಕುರಿತು ರಾಷ್ಟ್ರಪತಿಯವರ ಆದೇಶ ‘ಅಂತಿಮ ಹಂತ’ದಲ್ಲಿದ್ದು, ಈ ಕುರಿತ ನಿರ್ಧಾರವನ್ನು ಸರ್ಕಾರ ಜುಲೈ 24ರಿಂದ ಪ್ರಾರಂಭವಾಗುವ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಹೆಲ್ಮೆಟ್ ಕಡ್ಡಾಯ ಇಲ್ಲ
ಬೆಂಗಳೂರು, ಜುಲೈ 21– ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ (ಶಿರಸ್ತ್ರಾಣ) ಧರಿಸುವುದನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ಸಿ.ಆರ್. ಸಗೀರ್ ಅಹಮದ್ ಅವರು ಇಂದು ಇಲ್ಲಿ ತಿಳಿಸಿದರು.
‘ಈ ಹಿಂದೆ ಹೆಲ್ಮೆಟ್ ಕಡ್ಡಾಯದ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಸಾರ್ವಜನಿಕರಿಂದ ವಿರೋಧ ಬಂದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಕೈಬಿಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.