ADVERTISEMENT

25 ವರ್ಷಗಳ ಹಿಂದೆ: ಜಯಲಲಿತಾ ಅವರಿಗೆ 3 ವರ್ಷ ಜೈಲು ಶಿಕ್ಷೆ

ಪ್ರಜಾವಾಣಿ ವಿಶೇಷ
Published 9 ಅಕ್ಟೋಬರ್ 2025, 23:44 IST
Last Updated 9 ಅಕ್ಟೋಬರ್ 2025, 23:44 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಜಯಲಲಿತಾ ಅವರಿಗೆ 3 ವರ್ಷ ಜೈಲು ಶಿಕ್ಷೆ

ಚೆನ್ನೈ, ಅ. 9 (ಪಿಟಿಐ)– ತಾನ್ಸಿ ಭೂ ಖರೀದಿ ಹಗರಣಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯ ಇಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ, ಮೂರು ಹಾಗೂ ಎರಡು ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ನೀಡಿತು.

ಈ ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸಲಾಗುವುದೇ, ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದೇ ಒಂದು ಶಿಕ್ಷೆ ಜಾರಿಯಾದರೂ ಜಯಲಲಿತಾ ಅವರ ರಾಜಕೀಯ ಜೀವನದ ಮೇಲೆ ಭಾರಿ ಪರಿಣಾಮ ಬೀರಲಿದೆ.

ರಾಜ್ಯಾದ್ಯಂತ ಭಾರಿ ಮಳೆಗೆ 9 ಮಂದಿ ಬಲಿ

ಬೆಂಗಳೂರು, ಅ. 9– ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ 9 ಮಂದಿ ಬಲಿಯಾಗಿದ್ದು, ಆಸ್ತಿಪಾಸ್ತಿ ಗಳಿಗೆ ಭಾರಿ ಹಾನಿಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.