ನವದೆಹಲಿ, ಸೆ. 29– ಅಲ್ಪಮತ ಹೊಂದಿದ ತಮ್ಮ ಸರ್ಕಾರವನ್ನು ಅವಿಶ್ವಾಸ ಗೊತ್ತುವಳಿಯಿಂದ ರಕ್ಷಿಸಲು ಜೆಎಂಎಂ ಲೋಕಸಭಾ ಸದಸ್ಯರ ಮತ ಪಡೆಯಲು ಲಂಚ ನೀಡಿರುವ ಪ್ರಕರಣದಲ್ಲಿ ಆರೋಪಕ್ಕೊಳಗಾದ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಮತ್ತು ಮಾಜಿ ಸಚಿವ ಬೂಟಾ ಸಿಂಗ್ ಶಿಕ್ಷಾರ್ಹ ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತು.
ಇದರಿಂದಾಗಿ ಭಾರತದ ರಾಜಕೀಯ ಮತ್ತು ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿಯೊಬ್ಬರು ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿ ಯಾದಂತಾಗಿದೆ. ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಹರಿಯಾಣದ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್, ಕರ್ನಾಟಕದ ಮಾಜಿ ಮಂತ್ರಿಗಳಾದ ಎಚ್.ಎಂ. ರೇವಣ್ಣ, ರಾಮಲಿಂಗಾರೆಡ್ಡಿ, ಮತ್ತಿತರರನ್ನು ಆರೋಪದಿಂದ ಖುಲಾಸೆಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.