ಬೆಳಗಾವಿ, ಸೆಪ್ಟೆಂಬರ್ 5– ಉತ್ತರ ಕರ್ನಾಟಕದ ಬೆಳಗಾವಿ, ವಿಜಾಪುರ, ಬಾಗಲಕೋಟೆ, ಹುಬ್ಬಳ್ಳಿ, ಬಾದಾಮಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಇಂದು ನಸುಕಿನಲ್ಲಿ ಭೂಕಂಪ ಸಂಭವಿಸಿದೆ.
ಆದರೆ, ಈ ಭೂಕಂಪನದಿಂದ ಯಾವುದೇ ಸಾವು ಮತ್ತು ಆಸ್ತಿಪಾಸ್ತಿ ಹಾನಿ ಸಂಭವಿಸಿದ ವರದಿಯಾಗಿಲ್ಲ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.1ರಷ್ಟಿತ್ತು. ನಿದ್ದೆಯಲ್ಲಿದ್ದ ಜನ ಗಡಗಡ ಶಬ್ದ ಕೇಳಿ ಮನೆಯಿಂದ ಹೊರಗೆ ಓಡಿಬಂದರು.
ಮೂರು ಸಾವಿರಮಠ ರುದ್ರಮುನಿ ಮನವಿ ವಜಾ
ಹುಬ್ಬಳ್ಳಿ, ಸೆಪ್ಟೆಂಬರ್ 5– ಪ್ರತಿಷ್ಠಿತ ಮೂರುಸಾವಿರ ಮಠದ ಉತ್ತರಾಧಿಕಾರಿ ವಿವಾದಕ್ಕೆ ಸಂಬಂಧಿಸಿದಂತೆ ಸುತ್ತೂರು ಶ್ರೀಗಳ ನೇತೃತ್ವದ ಪಂಚ ಮಠಾಧೀಶ ಸಮಿತಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪದಚ್ಯುತ ಉತ್ತರಾಧಿಕಾರಿ ರುದ್ರಮುನಿ ದೇವರು ಅವರು ಸಲ್ಲಿಸಿದ್ದ ಮನವಿಯನ್ನು ಇಲ್ಲಿನ ಮೊದಲನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಇಂದು ಇಲ್ಲಿ ವಜಾ ಮಾಡಿ ಪಂಚ ಮಠಾಧೀಶ ಸಮಿತಿಯ ತೀರ್ಪಿನ ಸಿಂಧುತ್ವವನ್ನು ಎತ್ತಿ ಹಿಡಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.