ADVERTISEMENT

25 ವರ್ಷಗಳ ಹಿಂದೆ | ಗಡಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಒಲವು

ಪ್ರಜಾವಾಣಿ ವಿಶೇಷ
Published 30 ಜುಲೈ 2025, 0:18 IST
Last Updated 30 ಜುಲೈ 2025, 0:18 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಮಧ್ಯ ರೈಲ್ವೆ: ರಾಜ್ಯದ ಕಾಮಗಾರಿಗಳಿಗೆ ಕೇಂದ್ರ ಆದ್ಯತೆ

ಬೀದರ್, ಜುಲೈ 29– ದಕ್ಷಿಣ ಮಧ್ಯ ರೈಲ್ವೆಯಿಂದ ಕರ್ನಾಟಕದಲ್ಲಿ ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿ ಗಳನ್ನು ಶೀಘ್ರ ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಬಂಗಾರು ಲಕ್ಷ್ಮಣ ತಿಳಿಸಿದರು.

116 ಕಿ.ಮೀ. ಉದ್ದದ ಬೀದರ್‌– ಕಲ್ಬುರ್ಗಿ ರೈಲ್ವೆ  ಮಾರ್ಗ ನಿರ್ಮಾಣ ಕಾಮಗಾರಿಗೆ ಇಂದು ಇಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಗಡಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಒಲವು

ಮುಂಬೈ, ಜುಲೈ 29 (ಪಿಟಿಐ)– ಕರ್ನಾಟಕದೊಂದಿಗಿನ ಗಡಿ ಸಮಸ್ಯೆ ಇತ್ಯರ್ಥಗೊಳಿಸುವ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮಹಾರಾಷ್ಟ್ರ ಸರ್ಕಾರ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಕೇಳಿಕೊಳ್ಳಲಿದೆ.

ADVERTISEMENT

ಮುಖ್ಯಮಂತ್ರಿ ವಿಲಾಸರಾವ್‌ ದೇಶ್‌ಮುಖ್‌ ಇಂದು ಇಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.