ಅಣ್ಣನನ್ನು ಕೊಂದ ತಮ್ಮನಿಗೆ ಗಲ್ಲು ಶಿಕ್ಷೆ
ಬೆಂಗಳೂರು, ಸೆಪ್ಟೆಂಬರ್ 18– ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನು ಕೊಂದ ತಮ್ಮನಿಗೆ ನಗರದ ಹೆಚ್ಚುವರಿ ಮೊದಲ ಸೆಷನ್ಸ್ ನ್ಯಾಯಾಲಯವು ಗಲ್ಲುಶಿಕ್ಷೆ ವಿಧಿಸಿದೆ.
ಬಾಲು ಸಾ (26) ಶಿಕ್ಷೆಗೊಳಗಾದ ವ್ಯಕ್ತಿ. ಕಳೆದ ಜನವರಿ 19ರಂದು ತನ್ನ ಸಹೋದರ ಚಿಕ್ಕವೆಂಕು ಸಾ(40) ಎಂಬುವರನ್ನು ಕೊಲೆ ಮಾಡಿದ್ದ ಆರೋಪ ಈತನ ಮೇಲಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 69 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿ ದ್ದರು. ಈ ಪೈಕಿ 65 ಸಾಕ್ಷ್ಯಗಳ ವಿಚಾರಣೆ ನಡೆಸಲಾಗಿದೆ. ಆರೋಪ ಸಾಬೀತಾಗಿದ್ದರಿಂದ ಆಪಾದಿತನಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.