ADVERTISEMENT

25 ವರ್ಷಗಳ ಹಿಂದೆ| ಸೆಪ್ಟೆಂಬರ್‌ 14, 1996

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 19:30 IST
Last Updated 13 ಸೆಪ್ಟೆಂಬರ್ 2021, 19:30 IST
   

ಶಂಕರಾನಂದ ವಿರುದ್ಧ ಹೈಕೋರ್ಟಿಗೆ ವರದಿ

ನವದೆಹಲಿ, ಸೆ.13 (ಯುಎನ್‌ಐ)– ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣ ಆಮದು ಹಗರಣದಲ್ಲಿ ಕೇಂದ್ರ ಆರೋಗ್ಯ ಖಾತೆಯ ಮಾಜಿ ಸಚಿವ ಬಿ.ಶಂಕರಾನಂದ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟಿನಲ್ಲಿ ಇಂದು ಕೇಂದ್ರ ಸರ್ಕಾರದ ವೈದ್ಯಕೀಯ ಇಲಾಖೆ ಸಲ್ಲಿಸಿದ ತನಿಖಾ ವರದಿ ಬಹಿರಂಗಪಡಿಸಿದೆ.

ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ ಇಲ್ಲ

ADVERTISEMENT

ನವದೆಹಲಿ, ಸೆ.13 (ಯುಎನ್‌ಐ)– ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಕುರಿತ ಮಸೂದೆ ಅಂಗೀಕಾರ ಪಡೆಯಲು ವಿಫಲ ವಾಗಿದ್ದು, ಮಸೂದೆಯನ್ನು ಜಂಟಿ ಸದನ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲಾಗಿದೆ.

ನಗರದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿರುವ ‘ಮದ್ರಾಸ್‌ ಐ’

ಬೆಂಗಳೂರು ಸೆ.13– ‘ಮದ್ರಾಸ್‌ ಐ’ ಎಂದೇ ಖ್ಯಾತವಾಗಿರುವ ಕಣ್ಣಿನ ಸೋಂಕು ರೋಗ ನಗರದಲ್ಲಿ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮಿಂಟೋ ಕಣ್ಣಾಸ್ಪತ್ರೆಯಲ್ಲಿ ಕಣ್ಣಿನ ಪೊರೆ ತೆಗೆಯುವ ಶಸ್ತ್ರ ಚಿಕಿತ್ಸೆಯನ್ನು ಸೆ.23 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.