ಮಹಿಳೆಗೆ ಶೇ 33 ಮೀಸಲು: ಶೀಘ್ರ ಮಸೂದೆ
ನವದೆಹಲಿ, ಜುಲೈ 18(ಪಿಟಿಐ, ಯುಎನ್‌ಐ)– ಶಾಸನ ಸಭೆಗಳಲ್ಲಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಲೋಕಸಭೆಯ ಪ್ರಸಕ್ತ ಅಧಿವೇಶನದ ಅವಧಿಯಲ್ಲಿಯೇ ಮಂಡಿಸಲಾಗುವುದು ಎಂದು ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.
ಈ ಕಾಯಿದೆಯ ಅನ್ವಯ ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ 30 ಮೀಸಲಾತಿ ನೀಡಲಾಗುವುದು. ಇಂದು ರಾಜ್ಯಸಭೆಯಲ್ಲಿ ಶೂನ್ಯವೇಳೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು ಈ ವಿಷಯವನ್ನು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.