ADVERTISEMENT

50 ವರ್ಷಗಳ ಹಿಂದೆ: ಶನಿವಾರ 23-09-1972

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 15:37 IST
Last Updated 22 ಸೆಪ್ಟೆಂಬರ್ 2022, 15:37 IST
   

ಗಡಿ ಸಮಸ್ಯೆ ಉಲ್ಬಣಕ್ಕೆ ರಾಜಕಾರಣಿಗಳೇ ಕಾರಣ ಎಂದು ಅರಸು

ಮುಂಬಯಿ, ಸೆ. 22– ಮೈಸೂರು– ಮಹಾರಾಷ್ಟ್ರ ರಾಜ್ಯಗಳ ಗಡಿವಿವಾದದಿಂದ ಮತ್ತಷ್ಟು ಸಮಸ್ಯೆಗಳನ್ನು ಹುಟ್ಟಿಸುವುದಕ್ಕೆ ರಾಜಕಾರಣಿಗಳೇ ಕಾರಣ ಎಂದು ಮೈಸೂರು ರಾಜ್ಯದ ಮುಖ್ಯಮಂತ್ರಿ ಶ್ರೀ ದೇವರಾಜ ಅರಸು ಅವರು ಇಂದು ಆರೋಪಿಸಿದರು.

ಮುಂಬಯಿ ಕರ್ನಾಟಕ ಸಂಘ ಇಲ್ಲಿ ಏರ್ಪಡಿಸಿದ್ದ ಸತ್ಕಾರ ಕೂಟದಲ್ಲಿ ಮಾತನಾಡುತ್ತಿದ್ದ ಶ್ರೀ ಅರಸು ಅವರು, ‘ವಸತಿ, ಕುಡಿಯುವ ನೀರು ಹಾಗೂ ಅಭಾವದಿಂದ ಉಂಟಾಗಿರುವ ಪರಿಸ್ಥಿತಿ ಇಂದು ಜನತೆಯನ್ನು ಹೆಚ್ಚು ಕಾಡುತ್ತಿರುವ ಪ್ರಶ್ನೆ’ ಎಂದರು.

ADVERTISEMENT

ಮೈಸೂರು– ಮಹಾರಾಷ್ಟ್ರ ಗಡಿ ವಿವಾದ ವನ್ನು ಪ್ರಸ್ತಾಪಿಸಿದ ಅವರು, ‘ಮಹಾರಾಷ್ಟ್ರದಲ್ಲಿರುವ ಕನ್ನಡ ಮಾತನಾಡುವ ಜನರಾಗಲಿ ಅಥವಾ ಮೈಸೂರು ರಾಜ್ಯದ ಗಡಿ ಪ್ರದೇಶದಲ್ಲಿರುವ ಮರಾಠಿ ಮಾತನಾಡುವ ಜನರಾಗಲಿ ಈ ಗಡಿವಿವಾದಕ್ಕೆ ಹೆಚ್ಚಿನ ಮಹತ್ವ ಕೊಟ್ಟಿಲ್ಲ. ಆದರೆ, ರಾಜಕಾರಣಿಗಳ ಕಾರಣ ಈ ವಿವಾದ ಗಳು ಭಾವೋದ್ವೇಗ ಪಡೆದಿವೆ’ ಎಂದರು.

ಖ್ಯಾತ ಗಣಿತ ಶಾಸ್ತ್ರಜ್ಞ ಸಿ.ಎನ್. ಶ್ರೀನಿವಾಸ ಅಯ್ಯಂಗಾರ್ ನಿಧನ

ಬೆಂಗಳೂರು, ಸೆ. 22– ಖ್ಯಾತ ಗಣಿತ ಶಾಸ್ತ್ರಜ್ಞ ಡಾ.ಸಿ.ಎನ್. ಶ್ರೀನಿವಾಸ ಅಯ್ಯಂಗಾರ್ (72) ಅವರು ನಿನ್ನೆ ಇಲ್ಲಿ ನಿಧನರಾದರು.

ಸೆಂಟ್ರಲ್ ಕಾಲೇಜಿನಲ್ಲಿ ಗಣಿತಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಅವರು ಕೆಲ ಕಾಲ ಅದೇ ಕಾಲೇಜಿನ ಪ್ರಿನ್ಸಿಪಾಲ್ ಆಗಿದ್ದರು. ಅವರು ವಾಲ್ಮೀಕಿ ರಾಮಾಯಣವನ್ನು ಕನ್ನಡಕ್ಕೆ ಭಾಷಾಂತರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.