ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ| ಭಾನುವಾರ, 25–1–1998

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 19:30 IST
Last Updated 24 ಜನವರಿ 2023, 19:30 IST
   

ಬಾಬರಿ ಮಸೀದಿ ಧ್ವಂಸ ಘಟನೆಗೆ ಕಾಂಗ್ರೆಸ್‌ ಬೇಷರತ್ ಕ್ಷಮಾಪಣೆ

ನವದೆಹಲಿ, ಜ. 24– ಬಾಬರಿ ಮಸೀದಿಯನ್ನು ರಕ್ಷಿಸುವಲ್ಲಿ ವಿಫಲಗೊಂಡಿದ್ದಕ್ಕಾಗಿ ಕಾಂಗ್ರೆಸ್‌ ಪಕ್ಷವು ರಾಷ್ಟ್ರದ ಬೇಷರತ್‌ ಕ್ಷಮಾಪಣೆ ಕೋರಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಪ್ರಧಾನಿಯಾಗಿದ್ದ ಪಿ.ವಿ.ನರಸಿಂಹರಾವ್‌ ಅವರಿಗೆ ಈ ಬಾರಿ ಸ್ಪರ್ಧಿಸಲು ಟಿಕೆಟ್‌ ನಿರಾಕರಿಸುತ್ತಿರುವುದಾಗಿ ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಇಂದು ಇಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ADVERTISEMENT

ಬರುವ ಲೋಕಸಭೆ ಚುನಾವಣೆಯ ಅಂಗವಾಗಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ವರದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು.

ಇದು ತೀರಾ ಅನ್ಯಾಯ: ರಾವ್‌ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ, ಜ. 24– ‘ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ಲೋಕಸಭೆಗೆ ಸ್ಪರ್ಧಿಸಲು ತಮಗೆ ಟಿಕೆಟ್‌ ನೀಡದಿರುವುದು ಸಮರ್ಥನೀಯವಲ್ಲ ಮತ್ತು ನ್ಯಾಯೋಚಿತವಲ್ಲ’ ಎಂದು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರು ಹೇಳಿದ್ದಾರೆ.

ಟಿಕೆಟ್‌ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಸೀತಾರಾಂ ಕೇಸರಿ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ‘ಟಿಕೆಟ್‌ ನಿರಾಕರಣೆಗೆ ಇದೊಂದು ಕಾರಣವೇ ಅಲ್ಲ’ ಎಂದ ಅವರು, ಕೇಸರಿ ಅವರು ಮಾಡಿದ ಆರೋಪಗಳಿಗೆ ‘ಇದು ತಪ್ಪು, ಅಸತ್ಯ, ಅನ್ಯಾಯ. ನಿಜಸ್ಥಿತಿಗೆ ವಿರೋಧಾಭಾಸದಿಂದ ಕೂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.