ಬೆಂಗಳೂರು, ಮೇ 26– ರಾಜ್ಯದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಉತ್ಪಾದನೆ ಹೆಚ್ಚಿಸಲು ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಇಲ್ಲಿ ಕರೆ ನೀಡಿದರು.
ನಬಾರ್ಡ್‌ನ ವಿಕಾಸ ವಾಲೆಂಟರಿ ವಾಹಿನಿಯ ರಾಜ್ಯಮಟ್ಟದ ಪ್ರಗತಿ ಪರಿಶೀಲನೆ ಮತ್ತು ಅಭಿವೃದ್ಧಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಆಹಾರ ಉತ್ಪಾದನೆಯಲ್ಲಿ ರಾಜ್ಯದ ಪ್ರಗತಿ ಕಳೆದೆರಡು ವರ್ಷಗಳಿಂದ ಕುಂಠಿತಗೊಂಡಿದೆ. ಇದು ಆತಂಕಕಾರಿ ಬೆಳವಣಿಗೆ ಎಂದರು.
ಆಹಾರ ಧಾನ್ಯಗಳ ಉತ್ಪಾದನೆ ಜಾಸ್ತಿ ಆಗಬೇಕಾದರೆ ಉತ್ಪಾದಕತೆಯನ್ನು ಹೆಚ್ಚಿಸಬೇಕು. ರೈತರಿಗೆ ಸಕಾಲಕ್ಕೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಒದಗಿಸಿ ಆಧುನಿಕ ಹಾಗೂ ವೈಜ್ಞಾನಿಕ ಬೇಸಾಯ ಪದ್ಧತಿಗಳ ಪರಿಚಯ ಮಾಡಿಕೊಟ್ಟರೆ ಉತ್ಪಾದನೆ ಖಂಡಿತವಾಗಿ ಹೆಚ್ಚಾಗುತ್ತದೆ. ಈ ಕೆಲಸವನ್ನು ಕೃಷಿ ತಜ್ಞರು, ಅಧಿಕಾರಿಗಳು, ನಬಾರ್ಡ್ ಮುಂತಾದ ಹಣಕಾಸು ಸಂಸ್ಥೆಗಳು ಮಾಡಬೇಕಾಗಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.