ತುಮಕೂರು, ಆಗಸ್ಟ್ 12– ಹಿರಿಯ ಮುತ್ಸದ್ಧಿ ಎಸ್. ನಿಜಲಿಂಗಪ್ಪ ಅವರ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸ್ವಲ್ಪ ಮಾರ್ಪಾಡಿನೊಂದಿಗೆ ಅನುಷ್ಠಾನಗೊಳಿಸುವುದು ಖಚಿತವಾಗಿದೆ.
ಭದ್ರಾ ನದಿಯ 27 ಟಿಎಂಸಿ ಹೆಚ್ಚುವರಿ ನೀರನ್ನು ಉಪಯೋಗಿಸಿಕೊಂಡು ಬರಪೀಡಿತ ಪ್ರದೇಶಗಳ 15 ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುವ ಮತ್ತು ಈ ಭಾಗದಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ಸರ್ಕಾರ ಪರಿಶೀಲಿಸುತ್ತಿದ್ದು, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯುವುದು ಖಚಿತ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.