
ಚೆನ್ನೈ, ನ. 30– ಬಂಗಾಳ ಕೊಲ್ಲಿಯಲ್ಲಿ ನಿನ್ನೆ ಸಂಜೆ ಕಾಣಿಸಿಕೊಂಡ ಚಂಡಮಾರುತ ಕಡಲೂರು ಮತ್ತು ಪುದುಚೇರಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಹಾನಿ ಉಂಟು ಮಾಡಿದ್ದು, ಇದುವರೆಗೆ 12 ಮಂದಿಯನ್ನು ಬಲಿ ತೆಗೆದುಕೊಂಡಿದೆ.
ಚಂಡಮಾರುತದ ಪರಿಣಾಮ ಭಾರೀ ಮಳೆ ಮತ್ತು ಬಿರುಗಾಳಿ ಉಂಟಾಗಿ ಪುದುಚೇರಿಯಲ್ಲಿ ಇಬ್ಬರು ಸತ್ತಿದ್ದರೆ, ತಮಿಳುನಾಡಿನಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ವಾಯುಭಾರ ಕುಸಿತ ಪಶ್ಚಿಮಾಭಿಮುಖವಾಗಿದ್ದು, ಬಂಗಾಳ ಕೊಲ್ಲಿಯಲ್ಲೇ ಸ್ಥಿರಗೊಳ್ಳುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ.
ಬೆಂಗಳೂರು, ನ. 30– ಕನ್ನಡದ ಹಿರಿಯ ಲೇಖಕಿ ಜಯಲಕ್ಷ್ಮೀ ಶ್ರೀನಿವಾಸನ್ ಅವರಿಗೆ ಪ್ರಸಕ್ತ ಸಾಲಿನ ‘ದಾನಚಿಂತಾಮಣಿ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆ ಮಾಡಿದ ಮಹಿಳೆಯರಿಗೆ ರಾಜ್ಯ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.