
ಪ್ರಜಾವಾಣಿ ವಾರ್ತೆ
ಚೆನ್ನೈ, ಡಿ. 5– ಕ್ರಿಕೆಟ್ ಮೋಸದ ಆಟಕ್ಕೆ ಸಂಬಂಧಪಟ್ಟಂತೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮಹಮದ್ ಅಜರುದ್ದೀನ್ ಮತ್ತು ಅಜಯ್ ಶರ್ಮಾ ಅವರಿಗೆ ಆಜೀವ ನಿಷೇಧದ ಶಿಕ್ಷೆಯನ್ನು ವಿಧಿಸಿದೆ.
ಅಜಯ್ ಜಡೇಜಾ ಮತ್ತು ಮನೋಜ್ ಪ್ರಭಾಕರ್ ಅವರಿಗೆ ತಲಾ ಐದು ವರ್ಷಗಳ ಅಮಾನತು ಶಿಕ್ಷೆಯನ್ನು ವಿಧಿಸಲಾಗಿದೆ.
ಅಲ್ಲದೆ, ತಂಡದ ಮಾಜಿ ವೈದ್ಯ ಅಲಿ ಇರಾನಿ ಅವರನ್ನು ಕೂಡಾ ಐದು ವರ್ಷಗಳ ಕಾಲ ಅಮಾನತು ಶಿಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಸಿ. ಮುತ್ತಯ್ಯ ಅವರು ಇಂದು ಇಲ್ಲಿ ಪತ್ರಕರ್ತರಿಗೆ
ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.