ನವದೆಹಲಿ, ಆ. 14– ಇತ್ತೀಚಿನ ವರ್ಷಗಳ ಶಾಸನಸಭೆ ಚುನಾವಣೆಗಳಲ್ಲಿ ಹಣದ ಬಲ ಪ್ರಧಾನ ಪಾತ್ರ ವಹಿಸುತ್ತಿರುವ ಬಗ್ಗೆ ರಾಷ್ಟ್ರಪತಿ ವಿ.ವಿ. ಗಿರಿ ಅವರು ಎಚ್ಚರಿಕೆ ನೀಡಿದ್ದಾರೆ.
ಇಪ್ಪತ್ತೇಳನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ರಾಷ್ಟ್ರಕ್ಕೆ ನೀಡಿರುವ ಸಂದೇಶದಲ್ಲಿ ಈ ಎಚ್ಚರಿಕೆ ನೀಡಿರುವ ಗಿರಿಯವರು, ಸಂಯುಕ್ತ ಸಮಾಲೋಚನೆ ಮೂಲಕ ಈ ಪರಿಸ್ಥಿತಿ ನಿವಾರಿಸುವಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಕರೆ ಕೊಟ್ಟಿದ್ದಾರೆ.
ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸದೇ ಹೋದರೆ, ಜನತೆ ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆ ಕಳೆದುಕೊಳ್ಳುವರೆಂದು ಅವರು ತಿಳಿಸಿದ್ದಾರೆ.
ಚುನಾವಣೆಗಳಲ್ಲಿ ಪ್ರಧಾನ ಪಾತ್ರ ವಹಿಸಿರುವ ಈ ಧನಬಲ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಜೀವನದಲ್ಲಿನ ಭ್ರಷ್ಟ ಪ್ರಭಾವಗಳ ಮೂಲವಾಗಿದೆ ಎಂದು ತಿಳಿಸಿರುವ ಗಿರಿಯವರು, ಭಯ ಭೀತಿಗಳಿಲ್ಲದೆ ಮುಕ್ತ ರೀತಿಯಲ್ಲಿ ವಯಸ್ಕರ ಮತದಾನ ನಡೆಯುವುದೇ ಸರ್ಕಾರ ಜವಾಬ್ದಾರಿಯಿಂದ ವರ್ತಿಸಿ ಜನರ ಆಶೋತ್ತರಗಳನ್ನು ಈಡೇರಿಸುವುದಕ್ಕೆ ಉತ್ತಮ ಸಾಧನ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.