ಬೆಂಗಳೂರು, ಅ. 15– ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಏಳನೇ ಘಟಕದ ವಿಸ್ತರಣೆಗೆ ಬಹುಪಕ್ಷೀಯ ಒಪ್ಪಂದವೊಂದಕ್ಕೆ ಕರ್ನಾಟಕ ವಿದ್ಯುತ್ ನಿಗಮವು ಇಂದು ಇಲ್ಲಿ ಸಹಿ ಹಾಕುವ ಮೂಲಕ ಕರ್ನಾಟಕವು ದೇಶದಲ್ಲೇ ವಿದ್ಯುತ್ ಸುಧಾರಣಾ ಯೋಜನೆಗಳ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟ ಮೊದಲ ರಾಜ್ಯ ಎಂಬ ಕೀರ್ತಿಗೆ ಪಾತ್ರವಾಯಿತು.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಮ್ಮುಖದಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್), ಮೂಲ ಸೌಲಭ್ಯ ಅಭಿವೃದ್ಧಿ ಹಣಕಾಸು ಕಂಪನಿ (ಐಡಿಎಫ್‌ಸಿ), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಮತ್ತು ಆಂಧ್ರ ಬ್ಯಾಂಕ್‌ಗಳ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಹಾಕಿದರು.
ಬಳ್ಳಾರಿ: ಗೋಡೆ ಕುಸಿದು ಒಂದೇ ಕುಟುಂಬದ ಮೂವರ ಸಾವು
ಬಳ್ಳಾರಿ, ಅ. 15– ತಾಲ್ಲೂಕಿನ ಕುಂಟನಹಾಳ್ ಗ್ರಾಮದಲ್ಲಿ ಮಳೆಯಿಂದಾಗಿ ನಿನ್ನೆ ರಾತ್ರಿ ಮನೆಯೊಂದರೆ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸಂಭವಿಸಿದೆ.
ರಾಮಯ್ಯ (25), ಆತನ ಪತ್ನಿ ಓಬಳಮ್ಮ (22) ಮತ್ತು ಮಗ ಜಂಭುನಾಥ (4) ಎಂಬುವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಇವರು ಸೇರಿ ಜಿಲ್ಲೆಯಲ್ಲಿ ಮಳೆಯಿಂದ ಸತ್ತವರ ಸಂಖ್ಯೆ 16ಕ್ಕೆ ಏರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.