ಇಂಡಿ, ಜುಲೈ 28– ಸೊಲ್ಲಾಪುರದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಇಂಡಿ ಶಾಸಕ ರವಿಕಾಂತ ಪಾಟೀಲ್ ಅವರಿಗೆ ಸೊಲ್ಲಾಪುರ ಜಿಲ್ಲಾ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ನೆರವು ನೀಡಿದ ಇಬ್ಬರಿಗೆ 2 ವರ್ಷ ಸಜೆ ವಿಧಿಸಲಾಗಿದೆ.
ಒಂದು ವರ್ಷದ ಹಿಂದೆ ಸೊಲ್ಲಾಪುರ ಪೊಲೀಸರು ಇವರ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೈಲಿನಲ್ಲಿದ್ದೇ ಅವರು, ಪಕ್ಷೇತರ ಅಭ್ಯರ್ಥಿಯಾಗಿ 2ನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿರುವುದನ್ನು ಇಲ್ಲಿ
ಸ್ಮರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.