
ಗ್ರಾಮಸಭೆ ಕಡ್ಡಾಯ: ಕೇಂದ್ರ ಯೋಜನೆ
ಬೆಂಗಳೂರು, ಡಿ. 17– ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಉದ್ದೇಶದಿಂದ ವರ್ಷಕ್ಕೆ ಕನಿಷ್ಠ ನಾಲ್ಕು ಬಾರಿ ಧಾರ್ಮಿಕ ರೀತಿಯಲ್ಲಿ ‘ಗ್ರಾಮಸಭೆ’ ನಡೆಸುವುದನ್ನು ಕಡ್ಡಾಯಗೊಳಿಸುವ ಹಾಗೂ ಗ್ರಾಮೀಣ ಅಭಿವೃದ್ಧಿಯಲ್ಲಿ ಸಾರ್ವಜನಿಕರೂ ಪಾಲುದಾರರಾಗುವಂತೆ ಮಾಡುವ ರಾಷ್ಟ್ರೀಯ ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಇಂದು ಇಲ್ಲಿ ಈ ವಿಷಯ ತಿಳಿಸಿದರು. ಧಾರ್ಮಿಕವಾಗಿ ಗ್ರಾಮಸಭೆ ನಡೆಸುವುದು ಎಂದರೆ, ನಿಯಮಿತವಾಗಿ ಹಾಗೂ ಸರಿಯಾದ ರೀತಿಯಲ್ಲಿ ಎಂದರ್ಥ ಎಂಬ ಸಮಜಾಯಿಷಿಯನ್ನು ನೀಡಿದರು.
ಕಲ್ಬುರ್ಗಿ ವಿವಿಗೆ ಬಸವಣ್ಣನ ಹೆಸರು: ಆಗ್ರಹ
ರಾಯಚೂರು, ಡಿ. 17– ಕಲ್ಬುರ್ಗಿ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡುವುದು, ಶರಣ ಸಾಹಿತ್ಯ ಸಂಸ್ಕೃತಿಯ ಸಂರಕ್ಷಣೆ, ಕೃಷ್ಣ ಮೇಲ್ಡಂಡೆ ಯೋಜನೆಗೆ ತ್ವರಿತ ಕ್ರಮ, ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ, ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಮೂರ್ತಿ ಪ್ರತಿಷ್ಠಾಪನೆ ಮೊದಲಾದ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಬೇಗನೇ ಈಡೇರಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ 6ನೇ ಶರಣ ಸಾಹಿತ್ಯ ಸಮ್ಮೇಳನದ ಶರಣಾಧಿವೇಶನ ಸರ್ವಾನುಮತದಿಂದ ಅಂಗೀಕರಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.