
ಅನುಮತಿ ಇಲ್ಲದೆ ಸಿನಿಮಾ ನಟನೆ: ಬಿ.ಸಿ. ಪಾಟೀಲ್ ಅಮಾನತು
ಬೆಂಗಳೂರು, ಫೆ. 1– ಅನಧಿಕೃತವಾಗಿ ಗೈರುಹಾಜರಾಗಿ ಸಿನಿಮಾದಲ್ಲಿ ನಟನೆ ಮಾಡಿದ ಆರೋಪದ ಮೇಲೆ ಇನ್‌ಸ್ಪೆಕ್ಟರ್ ಬಿ.ಸಿ. ಪಾಟೀಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಸರ್ಕಾರಿ ನೌಕರರು ಅನುಮತಿ ಇಲ್ಲದೇ ಸಿನಿಮಾಗಳಲ್ಲಿ ನಟನೆ ಮಾಡುವುದನ್ನು 2 ತಿಂಗಳ ಹಿಂದೆ ಮುಖ್ಯ ಕಾರ್ಯದರ್ಶಿ ಅವರು ನಿಷೇಧಿಸಿದ್ದರು.
ಪ್ರಸ್ತುತ ಕರಾವಳಿ ಕಾವಲು ಪಡೆಯಲ್ಲಿ ಕೆಲಸದಲ್ಲಿರುವ ಬಿ.ಸಿ. ಪಾಟೀಲ್ ಇಲಾಖೆಯ ಪೂರ್ವಾನುಮತಿ ಇಲ್ಲದೆ ಸಿನಿಮಾಗಳಲ್ಲಿ ನಟನೆ ಮಾಡಿದ್ದಲ್ಲದೆ ಅನಧಿಕೃತವಾಗಿ ಗೈರುಹಾಜರಾಗಿದ್ದರು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾ ನಿರ್ದೇಶಕ ಆದೇಶಿಸಿದ್ದರು.
________
ವೈದ್ಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದಲ್ಲಿ ಸೇವೆ ಕಡ್ಡಾಯ
ಬೆಂಗಳೂರು, ಫೆ. 1– ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶ ಪಡೆಯುವುದಕ್ಕೆ ಮುಂಚೆ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿರಬೇಕು ಎಂಬ ನಿಯಮವನ್ನು ಜಾರಿಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.