ADVERTISEMENT

25 ವರ್ಷಗಳ ಹಿಂದೆ: ಹೈಕೋರ್ಟ್‌ ಪೀಠ ಬೇಡಿಕೆಗೆ ಸುಪ್ರೀಂ ಕೋರ್ಟ್ ತಿರಸ್ಕಾರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 22:30 IST
Last Updated 24 ಜುಲೈ 2025, 22:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ನವದೆಹಲಿ, ಜುಲೈ 24– ಉತ್ತರ ಕರ್ನಾಟಕದ ಯಾವುದಾದರೂ ಸೂಕ್ತ ಸ್ಥಳದಲ್ಲಿ ಹೈಕೋರ್ಟ್‌ ಪೀಠ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾ ಮಾಡಿತು.

ಈ ರೀತಿಯ ಪೀಠ ಸ್ಥಾ‍ಪಿಸುವು ದರಿಂದ ಹೈಕೋರ್ಟಿನ ಕಾರ್ಯಗಳಿಗೆ ಅನಗತ್ಯವಾಗಿ ತೊಂದರೆ ಆಗಬಹುದು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ಈ ಪ್ರಕರಣದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲು ಹೈಕೋರ್ಟ್‌ ಅತ್ಯಂತ ಸೂಕ್ತ ವೇದಿಕೆ ಎಂದಿದೆ.

ಆರು ಜಿಲ್ಲೆಗಳಲ್ಲಿ ಮಳೆಯ ಅಭಾವ

ADVERTISEMENT

ಬೆಂಗಳೂರು, ಜುಲೈ 24– ರಾಜ್ಯದ ಆರು ಜಿಲ್ಲೆಗಳಲ್ಲಿ ಕಳೆದ ವಾರ (ಜುಲೈ 16ರಿಂದ 22) ಮಳೆಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಅಲ್ಪ ಅಥವಾ ಸಾಧಾರಣ ಪ್ರಮಾಣದ ಮಳೆಯಾಗಿದ್ದು, ಮುಂಗಾರು ದುರ್ಬಲವಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳು ಮಳೆಯಾಗದ ಜಿಲ್ಲೆಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.