
ಧಾರವಾಡ, ಫೆ. 22– ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಕ್ಕಿರುವ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಎಲ್ಲ ರಾಜ್ಯಗಳ ಕೃಷಿ ಕಮಿಷನರ್ ಹಾಗೂ ಕೃಷಿ ತಜ್ಞರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ತಿಳಿಸಿದರು.
ಕೇಂದ್ರ ಕೃಷಿ ಕಾರ್ಯಾಚರಣೆ ಪಡೆ ಅಧ್ಯಕ್ಷ ಶರದ್ ಜೋಶಿಯವರ ಜತೆ ರೈತರ ಸಮಸ್ಯೆ ಕುರಿತು ಸಮಾಲೋಚಿಸಿದ್ದೇನೆ. ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲರೂ ತಮ್ಮ ಅನುಭವ ಹಾಗೂ ಸಮಸ್ಯೆಗಳನ್ನು ಹಂಚಿಕೊಂಡು ಸರಿಯಾದ ಅಭಿಪ್ರಾಯಕ್ಕೆ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು, ಫೆ. 22– ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಸೊಸೆ ಭವಾನಿ ಅವರ ಮೇಲೆ ಆ್ಯಸಿಡ್ ಎರಚಿದ ಪ್ರಕರಣದ ಸಮಗ್ರ ವಿಚಾರಣೆಗಾಗಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯೊಬ್ಬರಿಂದ ನ್ಯಾಯಾಂಗ ವಿಚಾರಣೆ ನಡೆಸಲಾಗುವುದು ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದರು.
ಜತೆಗೆ ಈ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರಿಗೆ ವಹಿಸದೆ ಸಿಒಡಿ ಪೊಲೀಸರಿಗೆ ವಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.