ADVERTISEMENT

ಅಂಗನವಾಡಿ ಕೇಂದ್ರವನ್ನು ತೆರೆಯಿರಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2012, 19:30 IST
Last Updated 9 ಜುಲೈ 2012, 19:30 IST

ಬೊಮ್ಮನಹಳ್ಳಿ ವಿಧಾನ ಸಭಾ ಕೇಂದ್ರ ಕಾಟೇರಮ್ಮ ನಗರ ಕೊತ್ತನೂರು ದಿಣ್ಣೆಯಲ್ಲಿ ಹಲವಾರು ವರ್ಷಗಳಿಂದ ಅಂಗನವಾಡಿ ಕೇಂದ್ರ ಮತ್ತು ಶಿಶುವಿಹಾರ ಕೇಂದ್ರಗಳಿದ್ದು ಈಗ 2 ವರ್ಷಗಳಿಂದ ಅಂಗನವಾಡಿ ಕೇಂದ್ರ ಮುಚ್ಚಿದೆ.

ಇಲ್ಲಿನ ಬಡ ಮಕ್ಕಳು ಶಿಶುವಿಹಾರ ಮತ್ತು ಅಂಗನವಾಡಿ ಕೇಂದ್ರವಿಲ್ಲದೆ ಬಡವರು, ದಲಿತರು ಮತ್ತು ಅಲ್ಪಸಂಖ್ಯಾತ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲದೆ ತೊಂದರೆಯಾಗಿದೆ.

ಈಗಾಗಲೇ ಸ್ಥಳೀಯರು ಮತ್ತು ಇತರೆ ನಾಗರೀಕರು ಜಿಲ್ಲಾಧಿಕಾರಿಗಳಿಗೆ, ಕಾರ್ಯನಿರ್ವಾಹಣಾಧಿಕಾರಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳಿಗೆ 2 ವರ್ಷಗಳಿಂದ ಮನವಿಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ.

ಸರ್ಕಾರ ತುರ್ತಾಗಿ ಕೊತ್ತನೂರು ದಿಣ್ಣೆಯಲ್ಲಿ ಪಾಳು ಬಿದ್ದಿರುವ ಕೊತ್ತನೂರು ದಿಣ್ಣೆಯ ಅಂಗನವಾಡಿ ಕೇಂದ್ರವನ್ನು ದುರಸ್ತಿ ಮಾಡಿಸಿ, ಶಿಕ್ಷಕರನ್ನು ನೇಮಕಾತಿ ಮಾಡಿ ತುರ್ತಾಗಿ ಅಂಗನವಾಡಿ ಕೇಂದ್ರವನ್ನು ತೆರೆದರೆ ಬಡಮಕ್ಕಳಿಗೆ ವಿದ್ಯಾರ್ಜನೆಗೆ ಅನುಕೂಲ ಮಾಡಿಕೊಡಲು ಸರ್ಕಾರ ತುರ್ತಾಗಿ ಗಮನಹರಿಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.