ADVERTISEMENT

ಅನಾಹುತವಾದೀತು!

ವೈ.ಎಸ್.ಅಕ್ಷತ, ಬೆಂಗಳೂರು
Published 11 ಜೂನ್ 2018, 20:12 IST
Last Updated 11 ಜೂನ್ 2018, 20:12 IST

ದೋಸ್ತಿ ಸರ್ಕಾರದ ಬಹುಮುಖ್ಯ ಭಾಗವಾಗಿರುವ ಡಾ. ಪರಮೇಶ್ವರ, ಸರ್ಕಾರ ರಚನೆಯ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದ್ದು ವರದಿಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ, ದೋಸ್ತಿ ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದಿದ್ದರೂ ಅವರು ಉಪಮುಖ್ಯಮಂತ್ರಿ ಆಗುತ್ತಿರಲಿಲ್ಲವೇನೋ, ಯಾಕೆಂದರೆ ಆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಮೊದಲೇ ನಿರ್ಧರಿಸಲಾಗಿತ್ತು.

ಕೆಪಿಸಿಸಿಯ ಜವಾಬ್ದಾರಿಯುತ ಹುದ್ದೆಯಲ್ಲಿದ್ದು, ಪಕ್ಷವನ್ನು ಅಧಿಕಾರಕ್ಕೆ ತರಲಾಗದ್ದಕ್ಕೆ ನೈತಿಕ ಹೊಣೆ ಹೊತ್ತು ಎಸ್.ಆರ್. ಪಾಟೀಲ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅದೇ ನೈತಿಕತೆ ಪರಮೇಶ್ವರ ಅವರಲ್ಲಿ ಕಾಣಿಸಲಿಲ್ಲ. ಲಭಿಸಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಜಾಣ್ಮೆಯನ್ನಾದರೂ ತೋರಲಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.