ಪಾತಕಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ವಿರೋಧಿಸಿ ಹಿಂದಿ ನಟ ಸಲ್ಮಾನ್ ಖಾನ್, ತಾವು ಮಾಡಿದ ಟ್ವೀಟ್‌ಗೆ ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತು ಕ್ಷಮೆ ಯಾಚಿಸಿದ್ದಾರೆ.
ಕೋರ್ಟ್ ಈ ಪ್ರಕರಣದ ಸತ್ಯಾಸತ್ಯತೆಯನ್ನು ಅರಿತೇ ಗಲ್ಲು ಶಿಕ್ಷೆ ಪ್ರಕಟಿಸಿರುವುದು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು.
ಸಲ್ಮಾನ್ ಅಸಂಖ್ಯಾತ ಪ್ರೇಕ್ಷಕರನ್ನು ಹೊಂದಿರುವ ನಟ. ತಮ್ಮ ನಡೆ-ನುಡಿಗಳಿಂದ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಬೇಕೇ ಹೊರತು ಇಂಥ ಅಪದ್ಧ ನುಡಿಗಳನ್ನಾಡಿ ಸಮಾಜವನ್ನು ತಪ್ಪುದಾರಿಗೆ ಎಳೆಯಬಾರದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.