ADVERTISEMENT

ಅಪರಿಚಿತ ಮುಖದ ಅನಾವರಣ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ದಿನೇಶ್ ಅಮಿನ್ ಮಟ್ಟು ಅವರು ಸ್ವಾಮಿ ವಿವೇಕಾನಂದರ ಅಪರಿಚಿತ ಮುಖವೊಂದನ್ನು ಅನಾವರಣಗೊಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ, ನಮ್ಮ ನಿಮ್ಮಂತೆ ಒಬ್ಬ ಸಾಧಾರಣ ಮನುಷ್ಯನಾಗಿದ್ದ ನರೇಂದ್ರನಾಥ್ ಎಲ್ಲ ಧರ್ಮಗ್ರಂಥಗಳನ್ನೂ ಅಧ್ಯಯನ ಮಾಡಿ,ಧರ್ಮದ ನಿಜವಾದ ತತ್ವಗಳ ಸಾರವನ್ನು ಹೀರಿ ಶಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ತತ್ವಗಳನ್ನು ಎತ್ತಿ ಹಿಡಿದ ಧೀಮಂತನಾಗಿ ಎತ್ತರವನೇರಿದ್ದು ಅವರಲ್ಲಿದ್ದ ಇಚ್ಛಾಶಕ್ತಿ, ಕ್ರಿಯಾಶೀಲತೆ ಮತ್ತು ಅಧ್ಯಯನಶೀಲತೆಗಳಿಂದ.

ಮಟ್ಟು ಅವರು ತಮ್ಮ ಲೇಖನವನ್ನು ಮುಗಿಸುತ್ತ `ಮನುಷ್ಯನೊಬ್ಬ ಇಂತಹ ಸಾಧನೆ ಮಾಡಲು ಸಾಧ್ಯವೇ? ಖಂಡಿತಾ ಸಾಧ್ಯ. ಅದಕ್ಕಾಗಿ ಆತ `ವಿವೇಕಾನಂದ~ ಆಗಿರಬೇಕು- ಎಂದು ಬರೆದಿರುವುದು ಅವರ ವ್ಯಕ್ತಿತ್ವವನ್ನು ಇನ್ನಷ್ಟು ಪ್ರಖರಗೊಳಿಸಿದೆ.
                                                           
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT