ADVERTISEMENT

ಅರ್ಥವಾಗದ ನಡೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2018, 19:30 IST
Last Updated 7 ಮಾರ್ಚ್ 2018, 19:30 IST

ಕರ್ನಾಟಕ ಲೋಕಸೇವಾ ಆಯೋಗವು 2017ರ ಜನವರಿ ತಿಂಗಳಲ್ಲಿ ಭೂವಿಜ್ಞಾನಿ ಹುದ್ದೆಗೆ ಅರ್ಜಿ ಆಹ್ವಾನಿಸಿ, ಮೇ 26 ಮತ್ತು 28 ರಂದು ಪರೀಕ್ಷೆಗಳನ್ನೂ ನಡೆಸಿತ್ತು. ಈಗ ಫಲಿತಾಂಶ ಮತ್ತು ಕಟ್ಆಫ್ ಅಂಕಗಳನ್ನೂ ಪ್ರಕಟಿಸದೆ 1ಃ3ರ ಅನುಪಾತದಲ್ಲಿ ನೇರ ಸಂದರ್ಶನಕ್ಕೆ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಕೆಪಿಎಸ್‌ಸಿಯ ಇಂತಹ ಅರ್ಥವಾಗದ ನಡೆಗಳಿಂದ ಅನೇಕ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಿದೆ. ಪರೀಕ್ಷೆಯಲ್ಲಿ ಚೆನ್ನಾಗಿ ಬರೆದಿರುವ ಎಷ್ಟೋ ಜನರ ಹೆಸರುಗಳು ಸಂದರ್ಶನಕ್ಕೆ ಆಯ್ಕೆಯಾದವರ ಪಟ್ಟಿಯಲ್ಲಿ ಬರದೇ ಇರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

‘ಪರೀಕ್ಷೆ ಹಾಗೂ ಸಂದರ್ಶನಗಳನ್ನು ಪಾರದರ್ಶಕವಾಗಿ ಮಾಡುತ್ತೇವೆ’ ಎಂದು ಕೆಪಿಎಸ್‌ಸಿ ಬಡಾಯಿ ಕೊಚ್ಚಿಕೊಳ್ಳುತ್ತದೆ. ಆದರೆ, ಯಾವುದೇ ಪರೀಕ್ಷೆಯ ಫಲಿತಾಂಶ ಮತ್ತು ಕಟ್‌ಆಫ್ ಅಂಕಗಳನ್ನು ಅದು ಪ್ರಕಟಿಸುವುದಿಲ್ಲ. ಇದು ಸರಿಯಲ್ಲ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪಾರದರ್ಶಕತೆ ಕಾಯ್ದುಕೊಂಡು, ಎಲ್ಲರಿಗೂ ನ್ಯಾಯ ಒದಗಿಸಬೇಕು.

ADVERTISEMENT

– ರಾಜು ಕಾಂಬಳೆ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.