ADVERTISEMENT

ಅರ್ಥವಿಲ್ಲದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 19:30 IST
Last Updated 24 ಏಪ್ರಿಲ್ 2018, 19:30 IST

‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರನ್ನು ಸೋಲಿಸಲು ನಡೆಸುತ್ತಿರುವ ಷಡ್ಯಂತ್ರವನ್ನು ಬಿ.ಎಸ್. ಯಡಿಯೂರಪ್ಪ ನಿಲ್ಲಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ಕುರುಬ ಸಮುದಾಯ ನೀಡಲಿದೆ’ ಎಂದು ನಿರಂಜನಾನಂದಪುರಿ ಸ್ವಾಮೀಜಿ ಹೇಳಿರುವುದು ಹಾಸ್ಯಾಸ್ಪದ ಎನಿಸುತ್ತದೆ.

ಚುನಾವಣೆಯಲ್ಲಿ ಒಬ್ಬರು ಇನ್ನೊಬ್ಬರನ್ನು ಸೋಲಿಸಲು ತಂತ್ರ ಮಾಡಿದರೆ ಅದು ಷಡ್ಯಂತ್ರ ಹೇಗಾಗುತ್ತದೆ? ಸ್ವಾಮೀಜಿ ಪ್ರಕಾರ, ಸಿದ್ದರಾಮಯ್ಯನವರ ಗೆಲುವಿಗೆ ಯಡಿಯೂರಪ್ಪ ಶ್ರಮಿಸಬೇಕೇನು? ‘ಸಿದ್ದರಾಮಯ್ಯ ಕುರುಬ ಸಮಾಜದ ಪ್ರಶ್ನಾತೀತ ನಾಯಕ’ ಎಂದು ಸ್ವಾಮೀಜಿ ಹೇಳಿದ್ದಾರೆ. ಹಾಗಿದ್ದರೆ ಅದೇ ಸಮುದಾಯದ ಈಶ್ವರಪ್ಪ ಅವರಂಥ ನಾಯಕರು ಎಲ್ಲಿಗೆ ಹೋಗಬೇಕು? ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಕುರುಬ ಸಮಾಜದವರು ಮಾತ್ರ ಗೆಲ್ಲಿಸಿದರೇನು? ಸ್ವಾಮೀಜಿಗಳು ಈ ರೀತಿಯ ಹೇಳಿಕೆ ಕೊಡುವುದನ್ನು ನಿಲ್ಲಿಸದಿದ್ದರೆ ಅವರ ಮೇಲಿನ ಗೌರವ ಹೊರಟು ಹೋಗುತ್ತದೆ.
ಶಿವಕುಮಾರ ಬಂಡೋಳಿ, ಹುಣಸಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT