ADVERTISEMENT

ಉತ್ತಮ ರಸ್ತೆ ನಿರ್ಮಿಸಲಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಬೆಂಗಳೂರಿನ ಹೃದಯ ಭಾಗದಲ್ಲಿರುವ ಮಾವಳ್ಳಿಯಲ್ಲಿ ಸುಮಾರು 10 ವರ್ಷಗಳಿಂದಲೂ ವಾಸವಾಗಿದ್ದೇವೆ. ಈ ಭಾಗದ ಬಹುತೇಕ ಬಡಾವಣೆಗಳಲ್ಲಿ ಕಚ್ಚಾ ರಸ್ತೆಗಳಿವೆ. ಮಳೆ ಬಂದಾಗ ಸ್ಥಿತಿ ಮತ್ತಷ್ಟು ಗಂಭೀರವಾಗಿರುತ್ತದೆ.

ಸುತ್ತಮುತ್ತಲಿನ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಚುನಾವಣೆ ಸಂದರ್ಭದಲ್ಲಿ ಮನೆ ಬಾಗಿಲಿಗೆ ಬಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿ ಹೋಗಿದ್ದ ಪ್ರತಿನಿಧಿಗಳು ನಂತರ ವಿಷಯವನ್ನೇ ಮರೆತಿದ್ದಾರೆ.

ವಿಸ್ತೀರ್ಣದಲ್ಲಿ ಕರ್ನಾಟಕಕ್ಕಿಂತಲೂ ಬಹಳ ಚಿಕ್ಕದಾಗಿರುವ ಮಲೇಷ್ಯಾದಲ್ಲಿ ವಿಸ್ತಾರವಾದ ರಸ್ತೆಗಳಿವೆ. ಅಲ್ಲಿನ ಸಂಚಾರ ವ್ಯವಸ್ಥೆ ಉತ್ತಮವಾಗಿದೆ. ಆ ರೀತಿ ಬೆಂಗಳೂರು ನಗರ ಅಭಿವೃದ್ಧಿಗೆ ಮಾದರಿಯಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.