ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ಸಾಕಷ್ಟು ದೊಡ್ಡದಿದೆ. ಜಿಲ್ಲೆಯ ಕರಾವಳಿ ಮತ್ತು ಘಟ್ಟದ ಮೇಲಿನ ಪ್ರದೇಶವೆಂದು ಎರಡು ಭಾಗಗಳಾಗಿ ಸ್ವಾಭಾವಿಕವಾಗಿಯೇ ವಿಂಗಡನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳನ್ನು ರಚಿಸುವ ಬೇಡಿಕೆಯನ್ನು ಸರ್ಕಾರ ಪರಿಶೀಲಿಸಬೇಕು.
ಉತ್ತರ ಕನ್ನಡ ಜಿಲ್ಲೆ ಅರಣ್ಯ ಮತ್ತು ಗುಡ್ಡಗಾಡಿನಿಂದ ಆವೃತ್ತವಾಗಿದೆ. ಅಧಿಕಾರಿಗಳು ಇಡೀ ಜಿಲ್ಲೆಯಲ್ಲಿ ಓಡಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ.
ಜಿಲ್ಲೆಯನ್ನು ವಿಭಜಿಸಿದರೆ ಎರಡು ಜಿಲ್ಲೆಗಳಾಗಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತದೆ. ಅಭಿವೃದ್ಧಿಯೂ ಸುಲಭವಾಗುತ್ತದೆ.
ಜಿಲ್ಲೆ ಜನರು ತಮ್ಮ ಸಂಸ್ಕೃತಿ ಹಾಗೂ ಪರಂಪರೆ ಉಳಿಸಿಕೊಂಡು ಬಂದಿದ್ದಾರೆ. ಜಿಲ್ಲೆ ವಿಭಜನೆ ಆದರೂ ಸಾಂಸ್ಕೃತಿಕ ಸಮಗ್ರತೆಗೆ ಭಂಗವಾಗುವುದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.