ನಂಜುಂಡಪ್ಪ ವರದಿ ಪ್ರಕಾರ ಮಧುಗಿರಿ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಸೇರಿದೆ. ಈ ತಾಲ್ಲೂಕಿನ ಹೆಚ್ಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳು ಸೇರಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ಬುಧವಾರದ ಸಂತೆಯಂದು, ರೈತರು ದವಸ–ಧಾನ್ಯ, ತರಕಾರಿ ಸಾಗಿಸುವುದು ಕಷ್ಟವಾಗಿದೆ. ತಾಲ್ಲೂಕಿನಲ್ಲಿ ಸಾರಿಗೆ ಘಟಕ ಸ್ಥಾಪಿಸಿ, ಎಲ್ಲ ಗ್ರಾಮಗಳಿಗೂ ಬಸ್ ಓಡಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.