ಇತ್ತೀಚೆಗೆ ಪದೇ ಪದೇ ಎಲ್‌ಪಿಜಿ ಅನಿಲ ಸಾಗಣೆ ವಾಹನಗಳ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಅದರಿಂದಾಗಿ ಅನಿಲ ಬಳಕೆದಾರರಿಗೆ ತೊಂದರೆ ಆಗುತ್ತಿದೆ.
ವಾಹನಗಳ ಮಾಲೀಕರು ಮತ್ತು ತೈಲ ಕಂಪೆನಿಗಳು ಮತ್ತು ಸರ್ಕಾರ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಸರ್ಕಾರ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಸೂಚಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.