
ಪ್ರಜಾವಾಣಿ ವಾರ್ತೆರಾಜ್ಯದ ಬಜೆಟ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವಕ್ಕೆ ಸರ್ಕಾರ ಒಂದು ಕೋಟಿ ರೂ ನೀಡಿರುವುದು ಸ್ವಾಗತಾರ್ಹ.
ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತ್ಯುತ್ಸವಕ್ಕೆ ಹಣ ನೀಡಿಲ್ಲ. ಇದು ತಾರತಮ್ಯ ಅಲ್ಲವೇ? ಮೈಸೂರು ಸಂಸ್ಥಾನವನ್ನು ಮಾದರಿ ರಾಜ್ಯವಾಗಿ ಅಭಿವೃದ್ಧಿ ಪಡಿಸಿದ ನಾಲ್ವಡಿಯವರು ಕೈಗಾರಿಕೆ, ಕೃಷಿ, ಶಿಕ್ಷಣ, ಕಲೆ ಮತ್ತಿತರ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ.
ನಾಲ್ವಡಿ ಅವರನ್ನು ಗಾಂಧೀಜಿ `ರಾಜರ್ಷಿ~ ಎಂದೇ ಹೊಗಳಿದ್ದರು. ಅಂತಹ ಆದರ್ಶ ವ್ಯಕ್ತಿಯ ಜಯಂತ್ಯುತ್ಸವಕ್ಕೆ ಸರ್ಕಾರ ಹಣ ನೀಡದೇ ಇರುವುದು ಲೋಪ ಅಲ್ಲವೇ? ತಕ್ಷಣವೇ ಹಣ ಬಿಡುಗಡೆ ಮಾಡಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.