ADVERTISEMENT

ಒಳಚರಂಡಿ ಸರಿಪಡಿಸಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2012, 19:30 IST
Last Updated 9 ಏಪ್ರಿಲ್ 2012, 19:30 IST

ಚರ್ಚ್ ಸ್ಟ್ರೀಟ್‌ನಲ್ಲಿರುವ ಒಳಚರಂಡಿ ಪೈಪ್‌ಗಳು ಹಲವು ವರ್ಷಗಳಿಂದ ಕಟ್ಟಿಕೊಂಡಿದ್ದು, ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ. ಈ ಕುರಿತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಪ್ರತಿದಿನ ಕೊಳಚೆ ನೀರು ಅಡುಗೆ ಮನೆ ಹಾಗೂ ಶೌಚಾಲಯಗಳಿಗೆ ವಾಪಾಸು ಬರುತ್ತಿದೆ. ಮಂಡಳಿಯ ಅಧಿಕಾರಿಗಳು ಈಗಿರುವ ಪೈಪ್‌ಗಳ ಬದಲಾಗಿ ದೊಡ್ಡ ಪೈಪ್‌ಗಳನ್ನು ಅಳವಡಿಸಬೇಕೆಂದು ಹೇಳುತ್ತಿದ್ದಾರೆ ವಿನಃ ಆ ಕಾರ್ಯ ಇನ್ನೂ ನಡೆದಿಲ್ಲ. ಕೂಡಲೇ ಈ ಸಮಸ್ಯೆಯನ್ನು ನಿವಾರಿಸುವತ್ತ ಗಮನ ಹರಿಸಲಿ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.