ಕನ್ನಡದ ಹೆಸರಿನಲ್ಲಿ ಹುಟ್ಟಿಕೊಂಡಿರುವ ಕೆಲವು ಸಂಘಟನೆಗಳು ಕನ್ನಡದ ಹೆಸರಿಗೆ ಮಸಿ ಬಳಿಯುವ ಕೆಲಸದಲ್ಲಿ ನಿರತವಾಗಿವೆ. ಸಾರ್ವಜನಿಕ ಆಸ್ತಿ ಪಾಸ್ತಿಗಳ ಮೇಲೆ ದಾಳಿ ಮಾಡುತ್ತ ಕಾನೂನನ್ನು ತಾವೇ ಕೈಗೆತ್ತಿಕೊಂಡಿರುವುದು ಆತಂಕಕಾರಿಯಾದ ಸಂಗತಿಯಾಗಿದೆ.
ಇತ್ತೀಚೆಗೆ ನಿತ್ಯಾನಂದ ಆಶ್ರಮದ ವಿಷಯದಲ್ಲಿ ಈ ಸಂಘಟನೆಗಳು ವರ್ತಿಸಿದ ರೀತಿ ಹಲವು ಸಂಶಯಕ್ಕೆ ಎಡೆಮಾಡಿಕೊಡುತ್ತದೆ. ಸುದ್ದಿಯನ್ನು ಬಿತ್ತರಿಸಬೇಕಾದ, ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಬೇಕಾದ ವಿದ್ಯುನ್ಮಾನ ಮಾದ್ಯಮಗಳು ಸ್ವತಃ ತಾವೇ ನ್ಯಾಯಾಧೀಶ ಸ್ಥಾನದಲ್ಲಿ ಕುಳಿತವರಂತೆ ಹಲವು ತೀರ್ಮಾನಗಳನ್ನು ಚರ್ಚೆಯ ಸಂದರ್ಭದಲ್ಲಿ ಬಿತ್ತರಿಸುತ್ತಿರುವುದು ವಿಷಾದನೀಯ.
ಸಮಾಜದಲ್ಲಿ ಯಾವುದೇ ಸಮಸ್ಯೆಗಳು ತಲೆದೋರಿದರೆ ಅದನ್ನು ಸಾರ್ವಜನಿಕರಿಗೆ ಮತ್ತು ಸಂಬಂಧಿಸಿದ ಇಲಾಖೆಗೆ ತಿಳಿಸಲು ಸರ್ಕಾರವು ಸೂಕ್ತ ಕ್ರಮವನ್ನು ಕೈಗೊಳ್ಳಲಿ.
ಆದರೆ ಈ ವಿದ್ಯುನ್ಮಾನ ಮಾಧ್ಯಮಗಳು ಸ್ವತಃ ತಾವೇ ತೀರ್ಮಾನಿಸುತ್ತ ಸಾಮಾಜಿಕ ಕಲಹಕ್ಕೆ/ ಸ್ವಾಸ್ಥ್ಯಕ್ಕೆ ಕಾರಣವಾಗುತ್ತಿರುವುದು ಆತಂಕಕಾರಿಯಾದ ಸಂಗತಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.