2010ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆ ಬರೆಯಲು ಕನ್ನಡ ವಿಷಯ ಆಯ್ಕೆ ಮಾಡಿಕೊಂಡಿದ್ದಕ್ಕೆ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಭಾರಿ ಶಿಕ್ಷೆ ನೀಡಿದೆ. ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಂಡು ಹೆಚ್ಚು ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ನಂತರ ಕೆಲವೊಂದು ಅಭ್ಯರ್ಥಿಗಳು ಕೋರ್ಟ್ ಮೆಟ್ಟಿಲೇರಿದ ನೆವ ಮಾಡಿಕೊಂಡು ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ಕನ್ನಡ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಹೆಚ್ಚಿನ ಅಂಕ ನೀಡದಂತೆ ನೋಡಿಕೊಂಡಿದೆ. ಅಷ್ಟೇ ಅಲ್ಲದೆ ಅನರ್ಹ ಮೌಲ್ಯಮಾಪಕರಿಂದ ಮೌಲ್ಯಮಾಪನ ಮಾಡಿಸಿ ಕನ್ನಡದ ಅಭ್ಯರ್ಥಿಗಳ ಕತ್ತು ಹಿಸುಕಿದೆ.
ಉದ್ಯೋಗ ಕೊಡುವ, ಅನ್ನ ಕೊಡುವ ಭಾಷೆ ಯಾವುದಾಗುತ್ತೊ ಆ ಭಾಷೆ ಬೆಳೆಯಲು ಸಾಧ್ಯ. ಕನ್ನಡ ನಮ್ಮ ಮಾತೃ ಭಾಷೆ, ಕನ್ನಡ ಭಾಷೆಯಲ್ಲಿ ಐಎಎಸ್/ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸರ್ಕಾರ ರೂ. 1.00 ಲಕ್ಷದಷ್ಟು ಬಹುಮಾನ ಘೋಷಿಸಿದೆ.
ಆದರೆ ಅದೇ ಕೆಎಎಸ್ ಪರೀಕ್ಷೆಯಲ್ಲಿ ಹೆಚ್ಚು ಅಭ್ಯರ್ಥಿಗಳು ಕನ್ನಡ ವಿಷಯ ಆಯ್ಕೆ ಮಾಡಿಕೊಂಡಿದ್ದಕ್ಕೆ ಉದ್ದೇಶಪೂರ್ವಕ ಕಡಿಮೆ ಅಂಕ ನೀಡಿದೆ. ಇದು ನಾಡಿನ ಕನ್ನಡ ಪರ ಹೋರಾಟಗಾರರಿಗೆ ಕಾಣುವುದಿಲ್ಲವೇ? ಕನ್ನಡ ಭಾಷೆ ಬಲ್ಲ ಅಧಿಕಾರಿಗಳು ಬೇಡವೇ? ಕನ್ನಡ ಪರ ಸಂಘಟನೆಗಳು, ಕನ್ನಡ ಸಾಹಿತಿಗಳು ಎಚ್ಚೆತ್ತು ಮರು ಮೌಲ್ಯಮಾಪನ ಮಾಡಿಸಿ ಕನ್ನಡಕ್ಕೆ, ಕನ್ನಡ ಭಾಷೆಗೆ, ಕನ್ನಡ ಜನತೆಗೆ ನ್ಯಾಯ ಒದಗಿಸಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.