ADVERTISEMENT

ಕನ್ನಡ ಭವನ ಬೇಗ ನಿರ್ಮಾಣವಾಗಲಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2012, 19:30 IST
Last Updated 8 ಮಾರ್ಚ್ 2012, 19:30 IST

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಮುಂಭಾಗದಲ್ಲಿ ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸದಾನಂದಗೌಡರು ಕಳೆದ ವರ್ಷ ನಡೆದ `ಬೆಂಗಳೂರು ಸಾಹಿತ್ಯ ಸಮ್ಮೇಳನ~ದ ನೆನಪಿನಲ್ಲಿ ಹನುಮಂತ ನಗರದಲ್ಲಿ ಬಿಡಿಎ ವಶದಲ್ಲಿರುವ ಸ್ಥಳದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದನ್ನು ಪತ್ರಿಕೆಗಳಲ್ಲಿ ಓದಿ ಸಂತೋಷವಾಯಿತು.

ಬೆಂಗಳೂರು ಬೃಹದಾಕಾರವಾಗಿ ಬೆಳೆದಿದೆ, ಬೆಳೆಯುತ್ತಲೇ ಇದೆ. ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಅದರ ಕೇಂದ್ರ ಕಚೇರಿ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಭವನದ ಅಗತ್ಯವಿದೆ.

ಸದಾನಂದ ಗೌಡರ ಅಧಿಕಾರಾವಧಿಯಲ್ಲೇ ಕನ್ನಡ ಭವನದ ನಿರ್ಮಾಣ ಕಾಮಗಾರಿ ಆರಂಭವಾಗಬೇಕು. ಅದಕ್ಕೆ ಅಗತ್ಯವಾಗ ಹಣಕಾಸನ್ನು ಅವರು ಬಜೆಟ್‌ನಲ್ಲಿ ಒದಗಿಸಬೇಕು. ಅವರ ಅಧಿಕಾರಾವಧಿಯಲ್ಲೇ ಭವನದ ಉದ್ಘಾಟನೆ ಆಗಬೇಕು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.