ಶಿಕ್ಷಣ ಸಚಿವರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇಲ್ಲವೆಂದು ಇತ್ತೀಚೆಗೆ ಮಾಧ್ಯಮಗಳ ಎದುರು ಹೇಳಿದ್ದಾರೆ. 2009 ರಲ್ಲಿ 8000 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದೆ ಎಂದು ಹೇಳಿದ್ದರು. ಕೇಂದ್ರದಿಂದ ಹಣಕಾಸಿಗೆ ಒಪ್ಪಿಗೆ ನೀಡಿದ ಕೂಡಲೇ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಎರಡು ತಿಂಗಳ ಹಿಂದೆ ಹೇಳಿದ್ದರು.
ಆದರೆ ಪಿಯು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಕರೆದು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿ ಕೈಬಿಟ್ಟಿರುವುದು ವಿಪರ್ಯಾಸ. ಇದು ಶಿಕ್ಷಕ ನಿರುದ್ಯೋಗಿಗಳ ಭವಿಷ್ಯದ ಮೇಲೆ ಬರೆ ಎಳೆದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.