ADVERTISEMENT

ಕಲಾವಿದರಿಗೆ ಮಾಸಾಶನ ಸಿಗಲಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST

ಕನ್ನಡ ಮತ್ತು ಸಂಸ್ಕೃತಿ ಸಚಿವರು ಸೆಪ್ಟೆಂಬರ್ 6 ರಂದು ಕರ್ನಾಟಕ ನಾಟಕ ಅಕಾಡೆಮಿಯ ಸುವರ್ಣ ಮಹೋತ್ಸವದ ಅಂಗವಾಗಿ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಬಡ ಕಲಾವಿದರಿಗೆ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲ ಮತ್ತು ವೃದ್ಧಾಪ್ಯದಿಂದಾಗಿ ಹಲವು ರೀತಿ ಕಾಯಿಲೆಗಳು ಕಾಡುತ್ತಿವೆ. 

 ಇದಕ್ಕಾಗಿ ಹೊಸ ಯೋಜನೆಗೆ ಪ್ರಯತ್ನ ನಡೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿರುತ್ತಾರೆ. ಇದು ನೂರಕ್ಕೆ ನೂರು ಸತ್ಯ.

ಹೀಗೆ 6-7 ವರ್ಷಗಳಿಂದ ಮಾಸಾಶನಕ್ಕಾಗಿ ಅರ್ಜಿ ನೊಂದಾಯಿಸಿದ್ದು ಅಕಾಡೆಮಿಯಿಂದ ಸಂದರ್ಶನ ಪೂರ್ಣಗೊಂಡಿದ್ದು ಮುಂದಿನ ಆದೇಶಕ್ಕಾಗಿ ಸುಮಾರು 3000 ಮಂದಿ ಕಲಾವಿದರು ಮಾಸಾಶನಕ್ಕಾಗಿ ಕಾಯುತ್ತಿದ್ದಾರೆ.

ಈ ವಿಷಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ನಿರ್ದೇಶಕರು ಹೇಳುತ್ತಿದ್ದಾರೆ.

ಆದರೆ ಈ ಬಗ್ಗೆ ಸರ್ಕಾರ ಕೂಡಲೇ ಕ್ರಮಕೈಗೊಂಡು ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಲಿ ಎಂದು ವಿನಂತಿಸುವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.