ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ 10 ಮಂದಿ ಪುರುಷರು ಮಾತ್ರ ಸ್ಪರ್ಧಿಸಿದ್ದಾರೆ. ಮಹಿಳೆಯರು ಏಕೆ ಸ್ಪರ್ಧಿಸಿಲ್ಲ ಎನ್ನುವುದು ಸಾಹಿತ್ಯ ವಲಯದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಪುರುಷನಿಗೆ ಸಮಾನವಾಗಿ ಪೈಪೋಟಿ ನೀಡುತ್ತಿದ್ದಾಳೆ. ಕರ್ನಾಟಕದಲ್ಲಿ ಮಹಿಳಾ ಸಾಹಿತಿಗಳು, ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಇದ್ದಾರೆ. ಒಬ್ಬ ಮಹಿಳೆಯಾದರೂ ಸ್ಪರ್ಧಿಸಬಹುದಿತ್ತು.
ಮಂಡ್ಯ ಜಿಲ್ಲಾ ಕ ಸಾ ಪ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯೊಬ್ಬರು (ಮೀರಾ ಶಿವಲಿಂಗಯ್ಯ) ಸ್ಪರ್ಧಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.