ADVERTISEMENT

ಕಾಟಾಚಾರದ ಆಚರಣೆ ಬೇಡ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2012, 19:30 IST
Last Updated 12 ಏಪ್ರಿಲ್ 2012, 19:30 IST

ರಾಜ್ಯ ಸರ್ಕಾರವು ಅಂಬೇಡ್ಕರ್ ಜಯಂತಿಯನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸುವುದನ್ನು   ಕಡ್ಡಾಯಗೊಳಿಸಿದೆ. ಆದರೆ ಅನುಷ್ಠಾನದಲ್ಲಿ ಎಡವಿದೆ. ಅನೇಕ ಶಾಲೆಗಳಲ್ಲಿ ಕಾಟಾಚಾರಕ್ಕೆ ಎಂಬಂತೆ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸುವ ಪರಿಪಾಠವಿದೆ.
 
ಹೀಗೆ ಮಾಡುವುದು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಂತೆ.
ಅಂಬೇಡ್ಕರ್ ಜಯಂತಿ ಅವಧಿ(ಏ.14)ಯಲ್ಲಿ ಶಾಲೆಗಳಿಗೆ ರಜೆ ಇರುವುದರಿಂದ  ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದಿಲ್ಲ.

ಶಾಲಾ, ಕಾಲೇಜುಗಳ ಶೈಕ್ಷಣಿಕ ಅವಧಿಯನ್ನು ಏಪ್ರಿಲ್ 15ರ ವರೆಗೂ ವಿಸ್ತರಿಸಿದರೆ ವಿದ್ಯಾರ್ಥಿಗಳು ಭಾಗವಹಿಸಲು ಅನುಕೂಲವಾಗುತ್ತದೆ. ಈ ಕುರಿತು ಸರ್ಕಾರ ಚಿಂತನೆ ನಡೆಸಬೇಕು. ದಲಿತ ವರ್ಗದ ಚುನಾಯಿತ ಪ್ರತಿನಿಧಿಗಳು ಇತ್ತ ಗಮನ ಹರಿಸಲಿ.

 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.