ADVERTISEMENT

‘ಕಾಲಾ’ಗೆ ವಿರೋಧ ಸರಿಯಲ್ಲ

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 19:30 IST
Last Updated 7 ಜೂನ್ 2018, 19:30 IST

ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಡಾ. ಪಿ.ವಿ. ನಾರಾಯಣ ಅವರ ‘ಧರ್ಮಕಾರಣ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಒತ್ತಡ ಬಂದಿತ್ತು. ಆಗ ಶಾಸಕರಾಗಿದ್ದ ವಾಟಾಳ್ ನಾಗರಾಜ್, ಅದನ್ನು ವಿರೋಧಿಸಿ ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿ ಹಿಡಿದಿದ್ದರು. ಅವರೇ ಇಂದು ರಜನಿಕಾಂತ್ ಅಭಿನಯದ ‘ಕಾಲಾ’ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ!

ರಜನಿಕಾಂತ್ ಕಾಡಿನಲ್ಲಿ ಬೆಳೆದ ಹೂವಿನಂಥ ಪ್ರತಿಭೆ. ನಾವೆಲ್ಲರೂ ಅವರನ್ನು ಕನ್ನಡಿಗರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಅವರು ಕೊಟ್ಟ ಹೇಳಿಕೆಯನ್ನು ಮುಂದಿಟ್ಟುಕೊಂಡು ಅವರ ಅಭಿನಯದ ಚಿತ್ರಕ್ಕೂ, ನದಿ ವಿವಾದಕ್ಕೂ ಸಂಬಂಧ ಕಲ್ಪಿಸಿ ಭಾಷಾ ಸಾಮರಸ್ಯ ಕೆಡಿಸುವುದು ಬೇಡ.

ಆರ್. ವೆಂಕಟರಾಜು, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.