362 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕದಲ್ಲಿ ಮೇಲ್ನೋಟಕ್ಕೆ ಭಾರಿ ಅಕ್ರಮ ನಡೆದಿರುವುದು ಮಾಧ್ಯಮಗಳಿಂದ ಬೆಳಕಿಗೆ ಬಂದಿದ್ದು ಸತ್ಯಾಸತ್ಯತೆ ಗೊತ್ತಾಗುವುದಕ್ಕೆ ತನಿಖೆ ಕೈಗೊಳ್ಳಲು ಸರ್ಕಾರ ನಿರ್ಧರಿಸುವುದು ಸ್ವಾಗತಾರ್ಹ ಕ್ರಮವೇ ಸರಿ.
ಆದರೆ ತನಿಖೆ ವಿಳಂಬವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಏಕೆಂದರೆ ಈಗಾಗಲೇ ವಿವಿಧ ಕಾರಣಗಳಿಂದ ನೇಮಕ ಪ್ರಕ್ರಿಯೆ ವಿಳಂಬವಾಗಿದ್ದು, ಇನ್ನೂ ವಿಳಂಬವಾದರೆ ಅರ್ಹ ಅಭ್ಯರ್ಥಿಗಳಿಗೆ ನಿರಾಸೆಯಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.