ADVERTISEMENT

ಕೊಲ್ಲುವುದು ಮನುಷ್ಯ ಧರ್ಮವೇ?

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 19:30 IST
Last Updated 5 ಮಾರ್ಚ್ 2018, 19:30 IST

ಎಚ್.ಡಿ. ಕೋಟೆ ತಾಲ್ಲೂಕಿನ ಗೊಲ್ಲನಬೀಡು ಗ್ರಾಮದಲ್ಲಿ ದಲಿತ ಯುವಕನನ್ನು ಒಕ್ಕಲಿಗ ಸಮುದಾಯದ ಒಬ್ಬ ಯುವತಿ ಪ್ರೀತಿಸಿದ್ದಕ್ಕೆ ತಂದೆಯೇ ಮಗಳಿಗೆ ವಿಷ ಕುಡಿಸಿ ಕೊಂದಿರುವ ಸುದ್ದಿ ಇತ್ತೀಚೆಗೆ ಮಾಧ್ಯಮಗಳಲ್ಲಿ ಬಿತ್ತರವಾಗಿದೆ. ಇದನ್ನು ನೋಡಿ ಮನಸ್ಸಿಗೆ ಆಘಾತವಾಯಿತು.

ಅನ್ಯಜಾತಿಯ ಯುವಕನನ್ನು ಪ್ರೀತಿಸಿದಳು ಎನ್ನುವ ಒಂದೇ ಕಾರಣಕ್ಕೆ ಹೆತ್ತ ಮಗಳನ್ನೇ ಕೊಲೆ ಮಾಡುವ ಮಟ್ಟಕ್ಕೆ ಈ ಸಮಾಜ ಹೋಗಿರುವುದು ದುರಂತಮಯ. ಇವರಲ್ಲಿ ಮನುಷ್ಯತ್ವ ಎಂಬುದು ಲವಲೇಶವೂ ಉಳಿದಿಲ್ಲವೇ? ಜಾತಿ ಎನ್ನುವ ರೋಗ ದಿನೇ ದಿನೇ ಕ್ಯಾನ್ಸರ್‍ನಂತೆ ಬೆಳೆಯುತ್ತಿದೆ. ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಜನಾಂದೋಲನ ರೂಪಿಸಬೇಕಾದ ತುರ್ತು ಇವತ್ತು ನಮ್ಮ ಮುಂದೆ ಇದೆ.
– ಡಾ. ರಾಜಕುಮಾರ ಎಂ. ದಣ್ಣೂರ, ಅಫಜಲಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT